*ಗಜಲ್* , ಸಿ.ಜಿ.ವೆಂಕಟೇಶ್ವರ, ತುಮಕೂರು

ಭೂರಮೆಯ ಸೊಬಗು ನೋಡಲು ಕಣ್ಣುಗಳು ಸಾಲವುದಿಲ್ಲ
ಪ್ರಕೃತಿ ಸಿರಿಯ ಬಣ್ಣಿಸಲು ಪದಗಳು ಸಾಲುವುದಿಲ್ಲ.

ಪರಿಸರದಲಿದೆ ಸಂಗೀತ ಹಕ್ಕಿಗಳ ಕಲರವ ದುಂಬಿಗಳ ಝೇಂಕಾರ .
ಸಿಡಿಲು ಮಳೆ ಗುಡುಗಿನಲೂ ಸಾಮಗಾನ ಕೇಳಲು ಕಿವಿಗಳು ಸಾಲುವುದಿಲ್ಲ.

ತರುಲತೆಗಳು ಖಗಮೃಗಗಳು ಕಾನನದ ಸೊಬಗಿನ ಮೂಲ
ನದನದಿ ಝರಿ ತೊರೆಗಳ ಅಂದ ಹೊಗಳಲು ರೂಪಕಗಳು ಸಾಲುವುದಿಲ್ಲ

ಮಲ್ಲೆ ಮಲ್ಲಿಗೆ ಜಾಜಿ ಕೇದಗೆ ಸಂಪಿಗೆಯ ಸುವಾಸನೆ ಬಲು ಚೆಂದ
ವರ್ಷಕಾಲದ ಮಣ್ಣವಾಸನೆಯ ಕಂಪು ಹೊಗಳಲು ಕವನಗಳು ಸಾಲುವುದಿಲ್ಲ.

ಈ ಜಗವು ಆನಂದಮಯವಾಗಲು ಸಿಹಿಜೀವಿಗಳ ಕೊಡುಗೆ ಅಪಾರ
ಪರಿಸರವ  ಬಳಸಿ ಉಳಿಸಿ ಬೆಳೆಸಲು ಸಣ್ಣ ಪ್ರಯತ್ನಗಳು ಸಾಲುವುದಿಲ್ಲ.

Leave a Reply

*ಸಿಹಿಜೀವಿಯ ಹನಿಗಳು* (ವಿಶ್ವ ಮಾದಕ ವಸ್ತುಗಳ ವಿರೋಧಿ ದಿನದ ಅಂಗವಾಗಿ )

July 7, 2020

ಉಳುಮೆ by ಸಿ ಜಿ ವೆಂಕಟೇಶ್ವರ.

July 7, 2020

Leave a Reply